Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:11 - ಪರಿಶುದ್ದ ಬೈಬಲ್‌

11 ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:11
33 ತಿಳಿವುಗಳ ಹೋಲಿಕೆ  

ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.


ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


“ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ಇಷ್ಟೆಲ್ಲಾ ಕಳೆದುಕೊಂಡರೂ ಯೋಬನು ಪಾಪ ಮಾಡಲಿಲ್ಲ; ದೇವರನ್ನೂ ದೂಷಿಸಲಿಲ್ಲ.


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!


ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.


ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’”


ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು