ಯಾಜಕಕಾಂಡ 24:2 - ಪರಿಶುದ್ದ ಬೈಬಲ್2 “ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವದಕ್ಕಾಗಿ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.