Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:22 - ಪರಿಶುದ್ದ ಬೈಬಲ್‌

22 “ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನ್ಯರಿಗಾಗಲಿ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ವಿಧಿಯಿರಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:22
8 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.


“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”


ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು