ಯಾಜಕಕಾಂಡ 24:5 - ಪರಿಶುದ್ದ ಬೈಬಲ್5 “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.