ಯಾಜಕಕಾಂಡ 24:9 - ಪರಿಶುದ್ದ ಬೈಬಲ್9 ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.” ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.