ಯಾಜಕಕಾಂಡ 25:10 - ಪರಿಶುದ್ದ ಬೈಬಲ್10 ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು. ಅಧ್ಯಾಯವನ್ನು ನೋಡಿ |