Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:11 - ಪರಿಶುದ್ದ ಬೈಬಲ್‌

11 ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಐವತ್ತನೆಯ ವರುಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು; ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಆದ ಹಣ್ಣನ್ನು ಸಂಗ್ರಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:11
5 ತಿಳಿವುಗಳ ಹೋಲಿಕೆ  

ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು.


ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.


ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು.


ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು