Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:16 - ಪರಿಶುದ್ದ ಬೈಬಲ್‌

16 ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರಂತೆ ಮಾರುವವನು ಇಷ್ಟು ವರುಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. [ಮುಂದಣ ಜೂಬಿಲಿ ಸಂವತ್ಸರದ ತನಕ] ಹೆಚ್ಚು ವರುಷಗಳಾದರೆ ಭೂವಿುಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು; ಭೂವಿುಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:16
4 ತಿಳಿವುಗಳ ಹೋಲಿಕೆ  

ಜ್ಯೂಬಿಲಿ ವರ್ಷಕ್ಕೆ ಇನ್ನೂ ಹೆಚ್ಚು ವರ್ಷಗಳು ಇರುವುದಾದರೆ, ಅವನು ಬಹಳ ಹೆಚ್ಚು ಹಣವನ್ನು ಕೊಡಬೇಕಾಗುತ್ತದೆ.


ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.


ನಿಮ್ಮ ನೆರೆಯವನ ಭೂಮಿಯನ್ನು ಕೊಂಡುಕೊಳ್ಳಲು ನೀವು ಬಯಸುವುದಾದರೆ, ಆಗ ಕಳೆದ ಜ್ಯೂಬಿಲಿ ವರ್ಷದಿಂದ ಈಗ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ನೀವು ಭೂಮಿಯನ್ನು ಮಾರುವುದಾದರೆ, ಪೈರುಗಳನ್ನು ಕೊಯ್ಯುವುದಕ್ಕಿರುವ ವರ್ಷಗಳನ್ನು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ.


ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು