Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:24 - ಪರಿಶುದ್ದ ಬೈಬಲ್‌

24 ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:24
12 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.


ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.


ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಬದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.


ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು