Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:28 - ಪರಿಶುದ್ದ ಬೈಬಲ್‌

28 ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:28
11 ತಿಳಿವುಗಳ ಹೋಲಿಕೆ  

ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹೋಗುವನು.


ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.


“ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.


ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.


ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.


ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು