Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:30 - ಪರಿಶುದ್ದ ಬೈಬಲ್‌

30 ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರುಷದೊಳಗಾಗಿ ಬಿಡಿಸಲ್ಪಡದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲಿಯೂ ಬಿಡುಗಡೆಯಾಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:30
3 ತಿಳಿವುಗಳ ಹೋಲಿಕೆ  

ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.


“ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.


ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು