Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:32 - ಪರಿಶುದ್ದ ಬೈಬಲ್‌

32 “ಆದರೆ ಲೇವಿಯರ ಪಟ್ಟಣಗಳ ಕುರಿತು ಹೇಳುವುದಾದರೆ, ಲೇವಿಯರು ತಮಗೆ ಸೇರಿದ ಪಟ್ಟಣಗಳಲ್ಲಿರುವ ತಮ್ಮ ಮನೆಗಳನ್ನು ಯಾವಾಗ ಬೇಕಾದರೂ ಹಿಂದಕ್ಕೆ ಕೊಂಡುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಲೇವಿಯರ ಸೊತ್ತಾಗಿರುವ ಪೇಟೆಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಲೇವಿಯರಿಗೆ ಯಾವಾಗಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ಲೇವಿಯರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:32
6 ತಿಳಿವುಗಳ ಹೋಲಿಕೆ  

ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.


ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಆ ಮನೆಯು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಆ ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.


ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.


ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು