Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:35 - ಪರಿಶುದ್ದ ಬೈಬಲ್‌

35 “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳುಕೊಂಡ ಪರವಾಸಿಯೆಂದು ಉದ್ಧಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:35
36 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.


ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.


ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.


“ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು