ಯಾಜಕಕಾಂಡ 25:39 - ಪರಿಶುದ್ದ ಬೈಬಲ್39 “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.