Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:43 - ಪರಿಶುದ್ದ ಬೈಬಲ್‌

43 ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:43
23 ತಿಳಿವುಗಳ ಹೋಲಿಕೆ  

ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.


ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.


ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.


ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.


ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಯಾಕೆಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರಮಾಡಿದೆನು; ಅವರು ಮತ್ತೆ ಗುಲಾಮರಾಗಬಾರದು.


“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.


ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪಮಾಡುತ್ತಿದ್ದೀರಿ.


“ನನ್ನ ಸೇವಕಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ


ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು