ಯಾಜಕಕಾಂಡ 25:46 - ಪರಿಶುದ್ದ ಬೈಬಲ್46 ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸೊತ್ತಾಗಿ ಕೊಟ್ಟುಬಿಡಬಹುದು. ಅವರನ್ನು ಶಾಶ್ವತ ಜೀತದಾರರನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಸ್ರಯೇಲರಾದ ನೀವೆಲ್ಲರು ಸಹೋದರರು. ಆದುದರಿಂದ ಒಬ್ಬರಿಂದೊಬ್ಬರು ಕ್ರೂರವಾಗಿ ಸೇವೆ ಮಾಡಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲ್ಯರಾದ ನೀವಾದರೋ ಎಲ್ಲರೂ ಸಹೋದರರಾಗಿರುವದರಿಂದ ಒಬ್ಬರಿಂದೊಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ. ಅಧ್ಯಾಯವನ್ನು ನೋಡಿ |