Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:47 - ಪರಿಶುದ್ದ ಬೈಬಲ್‌

47 “ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:47
7 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.


ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.


ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು.


ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು