ಯಾಜಕಕಾಂಡ 25:8 - ಪರಿಶುದ್ದ ಬೈಬಲ್8 “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದಲ್ಲದೆ ಏಳು ವರುಷಕ್ಕೊಂದರಂತೆ ಏಳು ಸಬ್ಬತ್ ವರುಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಾಲ್ವತ್ತೊಂಭತ್ತು ವರುಷಗಳು ಕಳೆದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.