ಯಾಜಕಕಾಂಡ 26:13 - ಪರಿಶುದ್ದ ಬೈಬಲ್13 ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”