ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.
ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”
ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.
ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.
ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.
ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ
ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.
“ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.
ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.
ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.
ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.