ಯಾಜಕಕಾಂಡ 26:16 - ಪರಿಶುದ್ದ ಬೈಬಲ್16 ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ಅಧ್ಯಾಯವನ್ನು ನೋಡಿ |
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.