Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:17 - ಪರಿಶುದ್ದ ಬೈಬಲ್‌

17 ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:17
30 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.


ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಸುಮಾರು ಮೂರು ಸಾವಿರ ಜನರು “ಆಯಿ”ಗೆ ಹೋದರು. ಆದರೆ “ಆಯಿ”ಯ ಜನರು ಇಸ್ರೇಲಿನ ಸುಮಾರು ಮೂವತ್ತಾರು ಜನರನ್ನು ಕೊಂದು ಹಾಕಿದರು. ಆದ್ದರಿಂದ ಇಸ್ರೇಲಿನ ಜನರು ಓಡಿಹೋದರು. “ಆಯಿ”ಯ ಜನರು ಅವರನ್ನು ಪಟ್ಟಣದ ದ್ವಾರದಿಂದ ಕಲ್ಲುಗಣಿಗಳವರೆಗೆ ಬೆನ್ನಟ್ಟಿಕೊಂಡು ಬಂದರು. “ಆಯಿ”ಯ ಜನರು ಅವರನ್ನು ಚೆನ್ನಾಗಿ ಥಳಿಸಿದರು. ಆಗ ಇಸ್ರೇಲರು ತುಂಬ ಭಯಗೊಂಡು ಧೈರ್ಯವನ್ನು ಕಳೆದುಕೊಂಡರು.


“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.


ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು.


“ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.


ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.


ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮ್ಮ ಪೂರ್ವಿಕರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವನು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು