Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:20 - ಪರಿಶುದ್ದ ಬೈಬಲ್‌

20 ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:20
21 ತಿಳಿವುಗಳ ಹೋಲಿಕೆ  

ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ನೀವು ಅವುಗಳನ್ನು ಅನುಸರಿಸಿದರೆ, ನಾನು ಸರಿಯಾದ ಸಮಯದಲ್ಲಿ ಮಳೆಯನ್ನು ಅನುಗ್ರಹಿಸುವೆನು. ಭೂಮಿಯು ಒಳ್ಳೆಯ ಬೆಳೆಯನ್ನು ಕೊಡುವುದು ಮತ್ತು ತೋಟದ ಮರಗಳು ತಮ್ಮ ಫಲಗಳನ್ನು ಕೊಡುವವು.


ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.


ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ಪೈರುಗಳನ್ನೂ ಮಿಡತೆಗಳು ತಿಂದುಬಿಡುವವು.


ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.


ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು