Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:22 - ಪರಿಶುದ್ದ ಬೈಬಲ್‌

22 ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:22
17 ತಿಳಿವುಗಳ ಹೋಲಿಕೆ  

ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ರಸ್ತೆಗಳು ಹಾಳಾಗಿ ಯಾರೂ ಅದರಲ್ಲಿ ನಡಿಯುವದಿಲ್ಲ. ಜನರು ತಾವು ಮಾಡಿದ ಒಪ್ಪಂದವನ್ನು ನಡಿಸುತ್ತಿಲ್ಲ. ಸಾಕ್ಷಿಗಳ ಮಾತುಗಳನ್ನು ಜನರು ಗೌರವಿಸಲು ನಿರಾಕರಿಸುತ್ತಾರೆ. ಜನರು ಒಬ್ಬರನ್ನೊಬ್ಬರು ನಂಬುವದಿಲ್ಲ.


ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.


ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು