Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:23 - ಪರಿಶುದ್ದ ಬೈಬಲ್‌

23 “ಇಷ್ಚಾದರೂ ನೀವು ತಿದ್ದಿಕೊಳ್ಳದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ತಲೆಬಾಗದೆ ನನಗೆ ವಿರೋಧವಾಗಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:23
9 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


“ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.


ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ.


ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೋ ಶತ್ರುವಾಗಿರುವೆ.


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು