Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:24 - ಪರಿಶುದ್ದ ಬೈಬಲ್‌

24 ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ನಿಮಗೆ ವಿರೋಧವಾಗಿ ನಡೆಯುವೆನು; ನಿಮ್ಮ ಪಾಪಗಳ ನಿವಿುತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:24
9 ತಿಳಿವುಗಳ ಹೋಲಿಕೆ  

ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೋ ಶತ್ರುವಾಗಿರುವೆ.


ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


“ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.


“ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ


ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು