Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:26 - ಪರಿಶುದ್ದ ಬೈಬಲ್‌

26 ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:26
17 ತಿಳಿವುಗಳ ಹೋಲಿಕೆ  

ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.


ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.


ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯೆಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.


ನೀನು ದಿನವೊಂದಕ್ಕೆ ಎಂಟು ರೊಟ್ಟಿಗಳನ್ನು ತಿನ್ನುವೆ. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ತಿನ್ನಬೇಕು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


“ನೀವು ನನ್ನ ಮಾತನ್ನು ಇನ್ನೂ ಕೇಳದೆ ನನಗೆ ವಿರೋಧವಾಗಿ ನಡೆದರೆ,


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”


ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು