ಯಾಜಕಕಾಂಡ 26:3 - ಪರಿಶುದ್ದ ಬೈಬಲ್3 “ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ, ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.