Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:30 - ಪರಿಶುದ್ದ ಬೈಬಲ್‌

30 ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:30
28 ತಿಳಿವುಗಳ ಹೋಲಿಕೆ  

ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.


ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.


ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.


ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.


ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ.


ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!


ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.


ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಆ ನಿನ್ನ ಪ್ರಿಯತಮರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನ್ನು ಕೆಡವಿಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆಯಾಗಿ ಮಾಡುವರು.


ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು