ಯಾಜಕಕಾಂಡ 26:35 - ಪರಿಶುದ್ದ ಬೈಬಲ್35 ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು. ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.