Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:36 - ಪರಿಶುದ್ದ ಬೈಬಲ್‌

36 ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:36
31 ತಿಳಿವುಗಳ ಹೋಲಿಕೆ  

ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.


“‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.


ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು.


ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.


ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.


ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದ್ದರಿಂದ ಶತ್ರುಗಳು ಅವರನ್ನು ಓಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು