ಯಾಜಕಕಾಂಡ 26:42 - ಪರಿಶುದ್ದ ಬೈಬಲ್42 ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿ |
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.