Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:45 - ಪರಿಶುದ್ದ ಬೈಬಲ್‌

45 ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:45
26 ತಿಳಿವುಗಳ ಹೋಲಿಕೆ  

ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.


ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದ್ದರಿಂದ ನಾನು ಅವರನ್ನು ನಾಶಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು.


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಬ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.


ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”


ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?


ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು