ಯಾಜಕಕಾಂಡ 26:5 - ಪರಿಶುದ್ದ ಬೈಬಲ್5 ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ಅಧ್ಯಾಯವನ್ನು ನೋಡಿ |
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.