ಯಾಜಕಕಾಂಡ 26:6 - ಪರಿಶುದ್ದ ಬೈಬಲ್6 ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.