ಯಾಜಕಕಾಂಡ 26:9 - ಪರಿಶುದ್ದ ಬೈಬಲ್9 “ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.