Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:11 - ಪರಿಶುದ್ದ ಬೈಬಲ್‌

11 “ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವವು. ಒಬ್ಬನು ಅಂಥ ಅಶುದ್ಧ ಪಶುಗಳಲ್ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪ್ರಾಣಿಯನ್ನು ಪ್ರತಿಷ್ಠಿಸಿದ್ದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪಶುವನ್ನು ಪ್ರತಿಷ್ಠಿಸಿದ್ದಾದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:11
4 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.


ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು