ಯಾಜಕಕಾಂಡ 27:13 - ಪರಿಶುದ್ದ ಬೈಬಲ್13 ಹರಕೆ ಮಾಡಿದವನು ಪಶುವನ್ನು ಮರಳಿ ಕೊಂಡುಕೊಳ್ಳಬೇಕೆಂದಿದ್ದರೆ, ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹರಕೆ ಮಾಡುವವನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹರಕೆ ಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. ಅಧ್ಯಾಯವನ್ನು ನೋಡಿ |
ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.
ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.