ಯಾಜಕಕಾಂಡ 27:16 - ಪರಿಶುದ್ದ ಬೈಬಲ್16 “ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಆಧಾರ ಮಾಡಿಕೊಂಡು ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್ (ಎರಡು ಖಂಡುಗ) ಜವೆಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶೆಕೆಲ್ ಬೆಲೆಬಾಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವನಾದರೂ ಪಿತ್ರಾರ್ಜಿತಭೂವಿುಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ನೀವು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಎರಡು ಕಂಡುಗ ಜವೆಗೋದಿಯ ಬೀಜವರಿಯುಳ್ಳ ಹೊಲವು ಐವತ್ತು ರೂಪಾಯಿ ಬಾಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು. ಅಧ್ಯಾಯವನ್ನು ನೋಡಿ |