ಯಾಜಕಕಾಂಡ 27:2 - ಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು