Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:23 - ಪರಿಶುದ್ದ ಬೈಬಲ್‌

23 ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರುಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:23
4 ತಿಳಿವುಗಳ ಹೋಲಿಕೆ  

ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು.


ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.


“ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ,


ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು