ಯಾಜಕಕಾಂಡ 27:27 - ಪರಿಶುದ್ದ ಬೈಬಲ್27 ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಶುದ್ಧಪ್ರಾಣಿಯಲ್ಲಿ ಹುಟ್ಟಿದ ಚೊಚ್ಚಲು ಮರಿಯನ್ನು ಹರಕೆಮಾಡಿದ್ದರೆ, ಹರಕೆಮಾಡಿದವನು ನಿಗದಿಯಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿಗದಿಯಾದ ಕ್ರಯಕ್ಕೆ ಮಾರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಶುದ್ಧ ಪಶುವಿನಲ್ಲಿ ಚೊಚ್ಚಲುಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು. ಅಧ್ಯಾಯವನ್ನು ನೋಡಿ |