Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:28 - ಪರಿಶುದ್ದ ಬೈಬಲ್‌

28 “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾವನಾದರೂ ಮನುಷ್ಯನನ್ನಾಗಲಿ ಪಶುವನ್ನಾಗಲಿ ಪಿತ್ರಾರ್ಜಿತಭೂವಿುಯನ್ನಾಗಲಿ ಬೇರೆ ಯಾವದನ್ನಾಗಲಿ ಕೇವಲ ಯೆಹೋವನದಾಗಿರುವದಕ್ಕೆ ಹರಕೆಮಾಡಿಕೊಟ್ಟರೆ ಅದನ್ನು ಮಾರಲೂ ಕೂಡದು ಬಿಡಿಸಿಕೊಳ್ಳಲೂ ಕೂಡದು. ಕೇವಲ ಯೆಹೋವನದಾಗಿರುವದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:28
35 ತಿಳಿವುಗಳ ಹೋಲಿಕೆ  

“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.


ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.


ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.


“ಇಸ್ರೇಲರು ಯೆಹೋವನಿಗೆ ಹರಕೆ ಹೊತ್ತುಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿದೆ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.


ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಆ ಸೈನಿಕರು ಹಾಗೆಯೇ ಮಾಡಿದರು.


ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.


ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.


ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.


ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.


ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.


ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.


ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು