ಯಾಜಕಕಾಂಡ 27:29 - ಪರಿಶುದ್ದ ಬೈಬಲ್29 ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕೇವಲ ಯೆಹೋವನ ಸೊತ್ತಾಗುವದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವದಕ್ಕಾಗದು; ಅವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.