ಯಾಜಕಕಾಂಡ 27:30 - ಪರಿಶುದ್ದ ಬೈಬಲ್30 “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.