33 ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.”
33 ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
33 ಆ ಪಶುಪ್ರಾಣಿ ಒಳ್ಳೆಯದೋ ಕೆಟ್ಟದ್ದೋ ಎಂದು ನೋಡಬಾರದು. ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದು ಹಾಗು ಅದಕ್ಕೆ ಬದಲಾಗಿ ಇಟ್ಟಿದ್ದು ಎರಡು ಸರ್ವೇಶ್ವರನದಾಗಿರಬೇಕು. ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.“
33 ಆ ಪಶುವು ಒಳ್ಳೇದೋ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲಾಗಿ ಲೆಕ್ಕಿಸಿದ್ದೂ ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನವಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ.
33 ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ”
ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.
ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.