Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:34 - ಪರಿಶುದ್ದ ಬೈಬಲ್‌

34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:34
13 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲರಿಗೆ ಕೊಟ್ಟ ಕಟ್ಟಳೆಗಳು, ನಿಯಮಗಳು ಮತ್ತು ಉಪದೇಶಗಳು ಇವೇ. ಇದು ಯೆಹೋವನ ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಯ ನಿಯಮಗಳಾಗಿವೆ. ಯೆಹೋವನು ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಕೊಟ್ಟನು. ಮೋಶೆ ಅವುಗಳನ್ನು ಜನರಿಗೆ ಕೊಟ್ಟನು.


ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.


ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞಾವಿಧಿಗಳು ಇವೇ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ.


(ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)


ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು