Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:8 - ಪರಿಶುದ್ದ ಬೈಬಲ್‌

8 “ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:8
11 ತಿಳಿವುಗಳ ಹೋಲಿಕೆ  

ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ಅರವತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಾದ ಪುರುಷನ ಬೆಲೆ ಹದಿನೈದು ಶೆಕೆಲ್‌ಗಳು. ಸ್ತ್ರೀಯ ಬೆಲೆ ಹತ್ತು ಶೆಕೆಲ್‌ಗಳು.


“ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು.


ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು