ಯಾಜಕಕಾಂಡ 27:9 - ಪರಿಶುದ್ದ ಬೈಬಲ್9 “ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಸರ್ವೇಶ್ವರನಿಗೆ ಸಮರ್ಪಿಸಬಹುದಾದ ಪ್ರಾಣಿಯನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿ |
ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶುವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.