ಯಾಜಕಕಾಂಡ 3:1 - ಪರಿಶುದ್ದ ಬೈಬಲ್1 “ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.